ಇಂದು ಸಿಇಟಿ ಫಲಿತಾಂಶ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ನಾಟಕ ಸಿಇಟಿ ಪರೀಕ್ಷಾ ಫಲಿತಾಂಶ ಇಂದು ಬೆಳಗ್ಗೆ 9.30ಕ್ಕೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ ಸುಧಾಕರ್ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಮಲ್ಲೇಶ್ವರದಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಇಂದು ಬೆಳಗ್ಗೆ 09.30ಕ್ಕೆ ವೃತ್ತಿಪರ ಕೋರ್ಸುಗಳಿಗೆ ಪ್ರವೇಶಾತಿ ಪಡೆಯಲು ಬಯಸುವ ಅಭ್ಯರ್ಥಿಗಳ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿರುವ ವೇಳಾಪಟ್ಟಿ ಪ್ರಕಾರ ಮೇ 20- ಜೀವಶಾಸ್ತ್ರ ಮತ್ತು ಗಣಿತ, ಮೇ 21- ರಸಾಯನಶಾಸ್ತ್ರ, ಭೌತಶಾಸ್ತ್ರ, ಮೇ 22- ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಸಲಾಗಿತ್ತು.

ವೃತ್ತಿಪರ ಕೋರ್ಸ್​ಗಳಿಗೆ ಪ್ರವೇಶಾತಿ ಬಯಸಿ 2.6 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದು, ಇವರ ಭವಿಷ್ಯ ಇಂದು ಬಹಿರಂಗವಾಗಲಿದೆ. ಕೆಇಎ ಅಧಿಕೃತ ವೆಬ್‌ಸೈಟ್‌ http://kea.kar.nic.in/ ಅಥವಾ https://cetonline.karnataka.gov.in/kea/ಗೆ ಭೇಟಿ ನೀಡಿ ವಿದ್ಯಾರ್ಥಿಗಳು ತಮ್ಮ ಸಿಇಟಿ ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!