ಮಹಾನಗರ ಪಾಲಿಕೆಗಳಲ್ಲಿ 704 ಪೌರಕಾರ್ಮಿಕ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ರಾಜ್ಯದ ವಿವಿಧೆಡೆ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 704 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಬಳ್ಳಾರಿ ಜಿಲ್ಲೆ ಉಡುಪಿ, ಚಿತ್ರದುರ್ಗ, ಮಂಡ್ಯ ಮತ್ತು ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಪೌರ ಕಾರ್ಮಿಕ ಹುದ್ದೆಗಳಿಗೆ ಫೆಬ್ರವರಿ 14,2023ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಖಾಲಿ ಹುದ್ದೆಗಳ ವಿವರ :
* ಬಳ್ಳಾರಿ – 220
* ಚಿತ್ರದುರ್ಗ – 30
* ಮಂಡ್ಯ – 170
* ತುಮಕೂರು – 129
* ಉಡುಪಿ – 155

ವಿದ್ಯಾರ್ಹತೆ :
ಸ್ಪಷ್ಟವಾಗಿ ಕನ್ನಡ ಮಾತನಾಡಲು ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಲ್ಲದೇ ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸ್ತುತ ಪೌರಕಾರ್ಮಿಕರಾಗಿ, ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಕ್ಲೀನಿಂಗ್ ವಿಭಾಗದಲ್ಲಿ ಕನಿಷ್ಠ ಎರಡು ವರ್ಷ ಕೆಲಸ ಮಾಡಿದ ಅನುಭವ ಇರಬೇಕು.

ವೇತನ :
ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 17,000 ರೂ.ನಿಂದ 28,950ರೂ. ವರೆಗೆ ವೇತನವನ್ನು ನೀಡಲಾಗುವುದು.

ವಯೋಮಿತಿ :
ಈ ಹುದ್ದೆಗಳಿಗೆ ಕನಿಷ್ಠ 18 ರಿಂದ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಅರ್ಜಿ ಶುಲ್ಕ :
ಸಾಮಾನ್ಯ ವರ್ಗ, 2ಎ/ 2ಬಿ/ 3ಎ/3ಬಿ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ :
ಅರ್ಹ ಅಭ್ಯರ್ಥಿಗಳು ಫೆಬ್ರವರಿ 14,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!