ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಕರ್ನಾಟಕ ಸಿಎಂ ಬೊಮ್ಮಾಯಿ, ”ಮಾಜಿ ಶಾಸಕರು ಹಾಗೂ ನನ್ನ ಆತ್ಮೀಯರಾಗಿದ್ದ ಶ್ರೀ ಶಿವಾನಂದ ಅಂಬಡಗಟ್ಟಿ ಅವರು ಹೃದಯಾಘಾತದಿಂದ ನಿಧನರಾದ ವಿಷಯ ಕೇಳಿ ಅತ್ಯಂತ ದುಃಖವಾಯಿತು. ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಅವರು ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು” ಎಂದು ಟ್ವೀಟ್‌ ಮಾಡಿದ್ದಾರೆ

ಮತ್ತೊಂದು ಟ್ವೀಟ್‌ ಮಾಡಿದ ಅವರು, “ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!