ದೆಹಲಿಯಲ್ಲಿ ಇಡಿ ಕಚೇರಿಗೆ ಹಾಜರಾದ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ದೆಹಲಿಯಲ್ಲಿನ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
60 ವರ್ಷದ ಶಿವಕುಮಾರ್ ಅವರು ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಕಚೇರಿಗೆ ತೆರಳುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿ, ತಾನೊಬ್ಬ ಕಾನೂನು ಪರಿಪಾಲಿಸುವ ನಾಗರಿಕ. ಆದ್ದರಿಂದ ತನ್ನನ್ನು ನಿಖರವಾಗಿ ಯಾವ ಪ್ರಕರಣದಲ್ಲಿ ಕರೆಯಲಾಗಿದೆ ಎಂದು ತಿಳಿದಿಲ್ಲದಿದ್ದರೂ ಫೆಡರಲ್ ಏಜೆನ್ಸಿಯ ಮುಂದೆ ಹಾಜರಾಗುತ್ತಿದ್ದೇನೆ ಎಂದು ಹೇಳಿದರು.
ಕರ್ನಾಟಕದಲ್ಲಿ ಸಂಚರಿಸುತ್ತಿರುವ ಭಾರತ್ ಜೋಡೋ ಯಾತ್ರೆಯ ವ್ಯವಸ್ಥೆಗಳನ್ನು ಹಿರಿಯ ಕಾಂಗ್ರೆಸ್ ನಾಯಕರು ನೋಡಿಕೊಳ್ಳುತ್ತಿದ್ದಾರೆ. ಆ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದರು. ಶಿವಕುಮಾರ್ ಕಳೆದ ಸೆಪ್ಟೆಂಬರ್ 19 ರಂದು ದೆಹಲಿಯಲ್ಲಿ ಇಡಿ ಮುಂದೆ ಹಾಜರಾಗಿದ್ದರು. ಆಗ ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಹಾಗೂ ಸಂಸದ ಡಿ ಕೆ ಸುರೇಶ್ ಅವರು ನ್ಯಾಷನಲ್ ಹೆರಾಲ್ಡ್ ಮಾಲೀಕತ್ವದ ಕಂಪನಿಯಾದ ಯಂಗ್ ಇಂಡಿಯನ್‌ಗೆ ಈ ಹಿಂದೆ ಅನಿರ್ದಿಷ್ಟ ಮೊತ್ತದ ಹಣವನ್ನು ದೇಣಿಗೆ ನೀಡಿದ್ದಕ್ಕೆ ಸಂಬಂಧಿಸಿದೆ. ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಕಳೆದ ಕೆಲವು ತಿಂಗಳುಗಳಿಂದ ಇಡಿ ವಿಚಾರಣೆ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!