ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ದಿವಾಳಿ ಹಂತಕ್ಕೆ ತಲುಪಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.
ಗೃಹಲಕ್ಷ್ಮೀ ಹಣ ಬಂದಿಲ್ಲ, ಅನ್ನಭಾಗ್ಯ ಅಕ್ಕಿನೂ ಬಂದಿಲ್ಲ. ನಾವು ಅಕ್ಕಿ ಕೊಡುತ್ತೇವೆ ಎಂದರೂ ರಾಜ್ಯ ಸರ್ಕಾರ ಖರೀದಿಸ್ತಿಲ್ಲ. ಇದೀಗ ಅಕ್ಕಿಯೂ ನೀಡ್ತಿಲ್ಲ, ಹಣವೂ ನೀಡ್ತಿಲ್ಲ. ಸಚಿವ ಮುನಿಯಪ್ಪ ಭೇಟಿ ಮಾಡಿ ಹೋದರೂ ಅಕ್ಕಿ ಆರ್ಡರ್ ಮಾಡಿಲ್ಲ. ಯಾಕೆಂದರೆ ಖರೀದಿಸಲು ಅವರ ಬಳಿ ಹಣವಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.