Thursday, June 1, 2023

Latest Posts

ನಟ ಶಿವರಾಜ್​ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಸುರ್ಜೇವಾಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿಯ ಜವಾಬ್ದಾರಿ ಹೊತ್ತಿರುವ ರಣದೀಪ್ ಸುರ್ಜೇವಾಲ, ಇಂದು ಬೆಳಗ್ಗೆ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅವರ ಭೇಟಿಯ ವೇಳೆ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಕೂಡ ಜೊತೆಯಿದ್ದರು.

ಈ ಕುರಿತಂತೆ ಟ್ವೀಟ್ ಮಾಡಿರುವ ಸುರ್ಜೇವಾಲಾ, ಇಂದು ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಧನ್ಯವಾದಗಳನ್ನು ತಿಳಿಸಿದೆ. ಅವರನ್ನು ಭೇಟಿ ಮಾಡಿದ್ದು ತುಂಬಾ ಖುಷಿ ಕೊಟ್ಟಿತು. ಗೀತಾ ಶಿವರಾಜಕುಮಾರ್‌ ಅವರು ಈಗಾಗಲೇ ಕಾಂಗ್ರೆಸ್‌ ಕುಟುಂಬದ ಭಾಗವಾಗಿದ್ದಾರೆ. ಇತ್ತೀಚೆಗಿನ ಚುನಾವಣೆಯಲ್ಲಿ ಅವರು ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು. ಹಾಗಾಗಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಅವರ ನಿವಾಸಕ್ಕೆ ಹೋಗಿದ್ದಾಗಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!