ಹೊಸದಿಗಂತ ಡಿಜಿಟಲ್ ಡೆಸ್ಕ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಸಂಭವಿಸಿರುವ ಅಸನಿ ಚಂಡಮಾರುತವು ಮತ್ತಷ್ಟು ತೀವ್ರತೆ ಪಡೆದುಕೊಂಡು ಮಂಗಳವಾರ ಸಂಜೆ ಮಾಯನ್ಮಾರ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಇದರ ಪರಿಣಾಮ ರಾಜ್ಯದ ಮೇಲೂ ಕಾಣಿಸಿಕೊಳ್ಳಲಿದ್ದು, ಮುಂದಿನ ಎರಡು ದಿನಗಳ ಅವಧಿಯಲ್ಲಿ ಕೊಡಗು, ಆಗುಂಬೆ, ಶಿೃಂಗೇರಿ ಭಾಗಗಳಲ್ಲಿ ಉತ್ತಮ ಮಳೆ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯ ಸಾಧ್ಯತೆ ನಿರೀಕ್ಷಿಸಲಾಗಿದೆ.
ಇನ್ನು ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಿಗೂ ವರುಣ ಕೃಪೆಯಾಗಲಿದೆ.
ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಮಳೆ ಸುರಿಯುವ ಮುನ್ಸೂಚನೆ ಇದೆ.
ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಸಹಿತ ರಾಜ್ಯದ ಉಳಿದೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ