spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಾಲಾ ಮಕ್ಕಳಲ್ಲಿ ಹೆಚ್ಚಿದ ಅಪೌಷ್ಟಿಕತೆ: ಬಾಳೆಹಣ್ಣು, ಮೊಟ್ಟೆ ನೀಡಲು ಸರ್ಕಾರ ನಿರ್ಧಾರ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಕ್ಕಳಲ್ಲಿ ಅಪೌಷ್ಟಿಕತೆ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆ ಸರ್ಕಾರಕ್ಕೆ ಆತಂಕ ಹೆಚ್ಚಾಗಿದೆ. ರಾಜ್ಯದ 7 ಜಿಲ್ಲೆಗಳಲ್ಲಿ 14 ಲಕ್ಷ ಮಕ್ಕಳಿಗೆ ರಕ್ತ ಹೀನತೆ ಸಮಸ್ಯೆ ಇದೆ ಎಂದು ವರದಿ ತಿಳಿಸಿದೆ.

ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್, ವಿಜಯಪುರ ಜಿಲ್ಲೆಗಳಲ್ಲಿನ ಮಕ್ಕಳಿಗೆ ಅಪೌಷ್ಟಿಕತೆ ಕಂಡುಬಂದಿದೆ. ಹಾಗಾಗಿ ಡಿಸೆಂಬರ್ 2021ರಿಂದ ಈ ಜಿಲ್ಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

6-15 ವರ್ಷದೊಳಗಿನ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲಾಗುತ್ತದೆ. ಇದಕ್ಕೆ 3,953.14 ಲಕ್ಷ ರೂ. ವೆಚ್ಚವಾಗಲಿದ್ದು, ಇದನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಪ್ರಾರ್ಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆ ತಿಳಿಸಿದೆ.

ಯಾದಗಿರಿ- ಶೇ.74, ಕಲಬುರಗಿ- ಶೇ.72.4, ಬಳ್ಳಾರಿ- ಶೇ.72.3, ಕೊಪ್ಪಳ- ಶೇ.70.7, ರಾಯಚೂರು- ಶೇ.70.6, ಬೀದರ್- ಶೇ.69.1, ವಿಜಯಪುರ- ಶೇ.68ರಷ್ಟು ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss