ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದು, ಈಗಾಗಲೇ ಸಿನಿಮಾದ ಹಾಡು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.
ಇದರ ನಡುವೆ ಸಿನಿಮಾದ ಕರ್ನಾಟಕ ವಿತರಣೆ ಹಕ್ಕು ಜಯಣ್ಣ ಕಂಬೈನ್ಸ್ ಪಾಲಾಗಿದೆ.
ಕನ್ನಡ ಸಿನಿಮಾರಂಗದ ಟಾಪ್ ನಿರ್ಮಾಣ ಸಂಸ್ಥೆಯಲ್ಲಿ ಜಯಣ್ಣ ಕಂಬೈನ್ಸ್ ಕೂಡ ಒಂದು. ಇತ್ತೀಚಿನ ದಿನಗಳಲ್ಲಿ ಜಯಣ್ಣ ಕಂಬೈನ್ಸಿನಿಂದ ಯಾವುದೇ ಹಿಟ್ ಸಿನಿಮಾಗಳು ಬಂದಿಲ್ಲ. ಮಫ್ತಿ ಸಿನಿಮಾ ಮೂಲಕ ಮತ್ತೆ ಕಮ್ ಬ್ಯಾಕ್ ಮಾಡಿದ್ದರು. ಮಫ್ತಿ ಸಿನಿಮಾ ಜಯಣ್ಣ ಅವರಿಗೆ ದೊಡ್ಡ ಸಕ್ಸಸ್ ತಂದುಕೊಟ್ಟಿತ್ತು. ಹಾಗೆ ಜೈಲರ್ ಮೂಲಕ ಮತ್ತೆ ಗೆಲುವಿನ ಟ್ರ್ಯಾಕ್‌ಗೆ ಮರಳುವ ನಿರೀಕ್ಷೆಯಲ್ಲಿದ್ದಾರೆ.
ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾದ ಕಾವಾಲ ಸಾಂಗ್ ಸಖತ್ ಟ್ರೆಂಡಿಂಗ್ ನಲ್ಲಿದೆ. ಈ ಹಾಡಿಗೆ ತಮ್ಮನ್ನ ಡಾನ್ಸ್ ಮಾಡಿದ್ದು ಇದೇ ಮೊದಲ ಬಾರಿಗೆ ಡಿಫ್ರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಈ ಹಾಡು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಯಾರ್ ನೋಡಿದ್ರು ಈ ಹಾಡಿಗೆ ರೀಲ್ಸ್ ಮಾಡಿ ಎಂಜಾಯ್ ಮಾಡುತ್ತಿದ್ದಾರೆ.
ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ಜೊತೆಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಸ್ಕ್ರೀನ್ ಶೇರ್ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ರಜನಿ ಜೊತೆ ಶಿವಣ್ಣ ಆಕ್ಟ್ ಮಾಡಿದ್ದು ಇದೇ ಕಾರಣಕ್ಕೆ ಕನ್ನಡಿಗರಿಗೂ ಕೂಡ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ.