ಹೊಸದಿಗಂತ ವರದಿ ಬಳ್ಳಾರಿ:
ನಗರದ ಜೋಳದರಾಶ ದೊಡ್ಡನಗೌಡ ರಂಗಮಂದಿರದಲ್ಲಿ ಭಾನುವಾರ ಕರ್ನಾಟಕ ನಾಟಕ ಅಕಾಡೆಮಿಯ 2021ನೇ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ಅದ್ದೂರಿಯಾಗಿ ನಡೆಯಿತು.
ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಸೇರಿದಂತೆ ವಿವಿಧ ಗಣ್ಯರು ಸುಧಾ ಹೆಗಡೆ ಸೇರಿದಂತೆ 32 ಜನರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ಬೂಡಾ ಅಧ್ಯಕ್ಷ ಕಾರ್ಕಲತೋಟ ಪಾಲನ್ನ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಭೀಮಸೇನ್, ರಾಜ್ಯ ಸದಸ್ಯ ಪ್ರಭುದೇವ ಕಪ್ಪಗಲ್, ಚೇಂಬರ್ ಆಫ್ ಕಾರ್ಮರ್ಸ್ ಅಧ್ಯಕ್ಷ ಶ್ರೀನಿವಾಸ್, ಬೆಳಗಲ್ ವೀರಣ್ಣ, ಜಯಪ್ರಕಾಶ ಗುಪ್ತ, ಗಾದೆಂ ಗೋಪಾಲ ಕೃಷ್ಣ, ಐನಾಥ್ ರೆಡ್ಡಿ, ದಾದಾ ಕಲಂದರ್, ರಾಮಚಂದ್ರ, ಯಶವಂತ ಭೂಪಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗಣ್ಣನವರ್ ಸೇರಿದಂತೆ ಕಲಾವಿದರು, ವಿವಿಧ ಗಣ್ಯರು ಉಪಸ್ಥಿತರಿದ್ದರು. ಸಂಘಟಕರಾದ ಅಡವಿಸ್ವಾಮೀ ಅವರು ವಂದಿಸಿದರು.