ಕಾಂಗ್ರೆಸ್ ಪ್ರಣಾಳಿಕೆ ರಿಲೀಸ್: ಬಜರಂಗದಳ, ಪಿಎಫ್ಐ ನಿಷೇಧ ಸಹಿತ ಮತ್ತೆ ಹಲವು ‘ಗ್ಯಾರೆಂಟಿ’ ಕೊಟ್ಟ ಕೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಪಕ್ಷ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಐದು ಗ್ಯಾರಂಟಿಗಳನ್ನು ನೀಡಿರುವ ಕಾಂಗ್ರೆಸ್​, ಪ್ರಣಾಳಿಕೆಯಲ್ಲಿ ಭರಪೂರ ಭರವಸೆಗಳನ್ನು ಘೋಷಿಸಿದೆ.

ಪ್ರಣಾಳಿಕೆಗೆ ಸರ್ವಜನಾಂದ ಶಾಂತಿಯ ತೋಟ ಎಂದು ಕಾಂಗ್ರೆಸ್​ ಹೆಸರನ್ನು ಇಟ್ಟಿದೆ. ಅಲ್ಲದೆ ಇದುವೇ ಕಾಂಗ್ರೆಸ್​ನ ಬದ್ಧತೆ ಎಂದು ಹೇಳಿದೆ.

ಕಾಂಗ್ರೆಸ್‌ ನೀಡಿರುವ ಭರವಸೆಗಳ ಪಟ್ಟಿಯಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷನವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳಲ್ಲು ಕಾಂಗ್ರೆಸ್‌ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ಕಾಂಗ್ರೆಸ್‌ ಯಾವುದೇ ವ್ಯಕ್ತಿಗಳಾಗಲಿ ಭಜರಂಗದಳ ಮತ್ತು ಪಿ.ಎಫ್‌.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ ಹಾಗಾಗಿ ಹಾಗಾಗಿ ವ್ಯಕ್ತಿ ಮತ್ತು ಸಂಘಟೆನಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಇದಲ್ಲದೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿರುವ ಇತರೆ ಭರವಸೆಗಳು ಕೆಳಗಿನಂತಿವೆ.

ಕಾಂಗ್ರೆಸ್​ ಪ್ರಣಾಳಿಕೆಯ ಮುಖ್ಯಾಂಶಗಳು:

  • ಬಿಪಿಎಲ್‌ ಕುಟುಂಬಕ್ಕೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿ
  • ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.
  • ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರವವರನ್ನು ಖಾಯಂ ಕೆಲಸಗಾರರನ್ನಾಗಿ ಮಾಡಲಾಗುತ್ತದೆ. ಆರೋಗ್ಯ & ಕುಟುಂಬ ಕಲ್ಯಾಣದಲ್ಲಿ ಕೆಲಸ ಮಾಡುವ ನೌಕರರ ಉದ್ಯೋಗ ಖಾಯಂ
  • ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟಿ ವಿದ್ಯುತ್‌ ಉಚಿತ
  • ಕರ್ನಾಟಕ ಕಾಫಿ ಉತ್ತೇಜನಕ್ಕಾಗಿ ಕಾಫಿ ಕರ್ನಾಟಕ ಬ್ರ್ಯಾಂಡ್​ ಸೃಷ್ಟಿ
  • ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
  • ಮಹಿಳೆಯರಿಗೆ ಸರ್ಕಾರಿ ಬಸ್‌ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
  • ಆಶಾ ಕಾರ್ಯಕರ್ತೆಯರ ಗೌರವಧನ 8ಸಾವಿರ ರೂ.ಗೆ ಹೆಚ್ಚಳ
  • ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಯುವಕರಿಗೆ ನೆರವು ( 3 ಸಾವಿರ ರೂ ಸಹಾಯಧನ)
  • ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು 1 ವರ್ಷದಲ್ಲಿ ಭರ್ತಿ
  • ಅಂಗನವಾಡಿ ಕಾರ್ಯಕರ್ತೆಯರ ವೇತನ 15ಸಾವಿರ ರೂ.ಗೆ ಹೆಚ್ಚಳ
  • ನೀರಾವರಿಗಾಗಿ 5 ವರ್ಷದಲ್ಲಿ 1.50 ಲಕ್ಷ ಕೋಟಿ ರೂ. ಮೀಸಲು
  • ಬಿಸಿಯೂಟ ನೌಕರರ ಗೌರಧನ 6 ಸಾವಿರ ರೂ.ಗೆ ಹೆಚ್ಚಳ
  • ರಾತ್ರಿಪಾಳಿಯ ಪೊಲೀಸ್‌ ಸಿಬ್ಬಂದಿ 5000 ರೂ. ವಿಶೇಷ ಭತ್ಯೆ
  • ಪ್ರತಿ ಜಿಲ್ಲೆಯಲ್ಲಿ ಸೈಬರ್‌ ಠಾಣೆ ನಿರ್ಮಾಣದ ಗುರಿ
  • ಕನಕಪುರದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
  • ಎನ್‌ ಇಪಿಯನ್ನು ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡುವುದು.
  • 4 ವರ್ಷದಲ್ಲಿ ಎಲ್ಲಾ ಪೊಲೀಸ್‌ ಸಿಬ್ಬಂದಿಗೆ ವಸತಿ ಸೌಲಭ್ಯ
  • ಮುಸ್ಲಿಂಮರ ಶೇ.4 ರಷ್ಟು ಮೀಸಲಾತಿ ಮರುಸ್ಥಾಪನೆ
  • ಬೆಂಗಳೂರಿನಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೆ ಬಸ್‌ ಸೌಲಭ್ಯ
  • ಎಲ್ಲಾ ಪೊಲೀಸರಿಗೆ ವರ್ಷಕ್ಕೆ 1 ತಿಂಗಳ ವೇತನ ಹೆಚ್ಚಳ
  • ಎಸ್‌ ಟಿ, ಎಸ್‌ ಸಿ ಮೀಸಲಾತಿ ಹೆಚ್ಚಳ
  • ನಾಡದೋಣಿ ಮೀನುಗಾರರಿಗೆ 10 ಸಾವಿರ ಹಣಕಾಸಿನ ನೆರವು
  • ಮೀನುಗಾರಿಕಾ ಕ್ಷೇತ್ರದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ
  • ಮೀನುಗಾರಿಕಾ ಮಹಿಳೆಯರಿಗೆ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ
  • ಎಸ್‌ ಸಿ ಸಮುದಾಯ ಮೀಸಲಾತಿ ಶೇ 17 ಹೆಚ್ಚಿಸುವ ಭರವಸೆ,ಎಸ್‌ ಟಿ ಸಮುದಾಯ ಮೀಸಲಾತಿ ಶೇ. 7 ಹೆಚ್ಚಿಸುವ ಭರವಸೆ
  • ಆಟೋ, ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪನೆ
  • ಕೋರ್ಟ್‌ ಗಳ ಆಧುನಿಕರಣ
  • ಪ್ರತಿ ಗ್ರಾಮ ಪಂಚಾಯತ್​ನಲ್ಲಿ ಹೈಸ್ಪೀಡ್​ ವೈಫೈ ಹಾಟ್​​ಸ್ಪಾಟ್​ ಸ್ಥಾಪನೆ
  • ಪತ್ರಕರ್ತರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ಭರವಸೆ
  • ಮಂಗಳಮುಖಿ ಮಂಡಳಿ ಸ್ಥಾಪಿಸುವ ಭರವಸೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!