ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಪಕ್ಷಕ್ಕೆ ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಕರ್ನಾಟಕದ ಜನರು ಬಾಹುಬಲಿಗೆ ಬಗ್ಗಲಿಲ್ಲ ಮತ್ತು ಅಂಜಲಿಲ್ಲ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.
ಮುಂಬೈ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಪದಾಧಿಕಾರಿಗಳ ಶಿಬಿರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸೋತಿರುವುದಕ್ಕೆ ಕರ್ನಾಟಕದ ಜನತೆಗೆ ವಿಶೇಷ ಧನ್ಯವಾದ ತಿಳಿಸಲು ಇಚ್ಛಿಸುತ್ತೇನೆ ಎಂದಿದ್ದಾರೆ.
ಮಹಾ ಶಕ್ತಿಯ ಜಂಬ ಎಂಬ ಬಲೂನ್‌ನನ್ನು ಒಡೆದು ಹಾಕಿದ್ದೀರಿ ಎಂದು ಕರ್ನಾಟಕದ ಮತದಾರರನ್ನು ಹಾಡಿ ಹೊಗಳಿದ್ದಾರೆ.