June 29, 2026
Monday, June 29, 2026
spot_img

ಮುಂದಿನ ಐದು ದಿನ ಮಳೆಯ ನಿರೀಕ್ಷೆಯಲ್ಲಿ ಕರ್ನಾಟಕ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹವಾಮಾನ ಇಲಾಖೆ ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಕೆಲವು ದಿನಗಳಲ್ಲಿ ಗುಡುಗು-ಮಿಂಚಿನೊಂದಿಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿಗೆ ಆರೆಂಜ್ ಅಲರ್ಟ್

ಜೂನ್ 30ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ:

ರೈತರಲ್ಲಿ ಹೆಚ್ಚಿದ ಆತಂಕ

ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದ ಕಾರಣ ಈ ಬಾರಿ ಉತ್ತಮ ಬೆಳೆ ನಿರೀಕ್ಷಿಸಿದ್ದ ರೈತರಿಗೆ ಈಗ ನಿರಾಸೆಯಾಗಿದೆ. ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬಿತ್ತನೆ ವಿಳಂಬವಾಗಿದ್ದು, ಈಗಾಗಲೇ ಬಿತ್ತಿದ ಬೆಳೆಗಳು ಒಣಗಲಾರಂಭಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !