ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ದಿಡೀರ್ ಸುದ್ದಿಗೋಷ್ಠಿ ಕರೆದಿದ್ದು, ನಿನ್ನೆ ಕೇಂದ್ರ ಘೋಷಿಸಿರುವ ಬಜೆಟ್ ನಿಂದ ಕರ್ನಾಟಕಕ್ಕೆ ಒದಗಿರುವ ಲಾಭಗಳ ಕುರಿತು ಮಾತನಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಆರ್ಥಿಕ ಸ್ಥಿತಿ ಪ್ರಗತಿ ಹೊಂದಿದ ದೇಶಗಳಲ್ಲಿ ಭಾರತವು ಆರ್ಥಿಕವಾಗಿ ಪ್ರಗತಿ ಹೊಂದುತ್ತಿರುವುದು ಗೊತ್ತಾಗುತ್ತದೆ. ನಮ್ಮ ದೇಶದ ಹಣಕಾಸು ಪರಿಸ್ಥಿತಿ ಭದ್ರಬುನಾದಿ ಮೇಲಿದೆ ಎಂದಿದ್ದಾರೆ.
ಭಾರತದ ಜಿಡಿಪಿ ಆರೋಗ್ಯಕರವಾಗಿದೆ ಎಂದು ಅರ್ಥೈಸಿಕೊಳ್ಳಬೇಕು. ಭಾರತದ ಆರ್ಥಿಕ ಸ್ಥಿತಿ ಶೇಕಾಡ 6.8ರಷ್ಟಿದೆ. ಮೌಲಸೌಕರ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿದ್ದು ಸ್ವಾಗತ. ಕೇಂದ್ರ ಬಜೆಟ್ ದೇಶದ ಅಭಿವೃದ್ಧಿಗೆ ಪೂರಕವಾಗಿದ್ದು, ಕರ್ನಾಟಕ್ಕೆ ಭಾರಿ ಲಾಭ ದೊರೆತಿದೆ.
ಜನಜೀವನ್ ಮಿಷನ್ ಯೋಜನೆಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಪ್ರತಿಮನೆಗೂ ಕುಡಿಯುವ ನೀರು ಪೂರೈಸಲು ಅನುಕೂಲವಾಗುತ್ತಿದೆ ಎಂದು ತಿಳಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯಿಂದ ಭಾರೀ ಒಳಿತಾಗಲಿದೆ ಹಾಗಾಗಿ ಕೇಂದ್ರಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.