ಕರ್ನಾಟಕ ಪಿಎಸ್‌ಐ ನೇಮಕಾತಿ ಹಗರಣ: ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಭಾರೀ ಚರ್ಚೆಗೆ ಗುರಿಯಾಗಿದ್ದ 545 ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ.

ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು,
ಪ್ರಕರಣದ ತನಿಖೆಯನ್ನು ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು. ಈ ನ್ಯಾಯಾಂಗ ತನಿಖೆಗೆ ಪೊಲೀಸ್ ಇಲಾಖೆ ಹಾಗೂ ಸಿಐಡಿ ಸಹಕರಿಸಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಪಿಎಸ್​ಐ ಹಗರಣ ಭಾರಿ ಸದ್ದು ಮಾಡಿತ್ತು. ಈ ಹಗರಣ ವಿಚಾರವಾಗಿ ಅಂದಿನ ಗೃಹ ಮಂತ್ರಿ ಆರಾಗ ಜ್ಞಾನೇಂದ್ರ ಅವರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತ್ತು. ನಾವು ಅಧಿಕಾರಕ್ಕೆ ಬಂದ ಕೂಡಲೆ ತನಿಖೆ ಮಾಡುತ್ತೇವೆ ಎಂದು ಕಾಂಗ್ರೆಸ್​ ಹೇಳಿತ್ತು. ಅದರಂತೆಯೇ ಇದೀಗ ತನಿಖೆಗೆ ಆದೇಶ ನೀಡಿದೆ.

ಪಿಎಸ್​ಐ 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2021ರ ಜನವರಿ 21 ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಅಕ್ಟೋಬರ್​ 3 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!