Saturday, February 4, 2023

Latest Posts

ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ ಮಾಡಿದ ರಾಜ್ಯ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಹಾವೀರ ಜಯಂತಿ ದಿನಾಂಕ ಬದಲಾವಣೆ ಮಾಡಿರುವ ಕುರಿತು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.

ಈ ಹಿಂದೆ ಏಪ್ರಿಲ್‌ 3,2023ರಂದು ಮಹಾವೀರ ಜಯಂತಿ ಪ್ರಯುಕ್ತ ರಜೆಯನ್ನು ಘೋಷಿಸಲಾಗಿತ್ತು. ಆದರೆ ಏಪ್ರಿಲ್‌ 3,2023 ಅನ್ನು ಏಪ್ರಿಲ್ 4,2023 ಎಂಬುದಾಗಿ ತಿದ್ದಿ ಓದಿಕೊಳ್ಳತಕ್ಕದ್ದು ಎಂದು ತಿಳಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ-1 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ರಾಜ್ಯ ಶಿಷ್ಟಾಚಾರ) ಅಪೇಕ್ಞಾ ಸತೀಶ್ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!