ರಾಜ್ಯ ಸರಕಾರಿ ನೌಕರರಿಗೆ 2.75% ತುಟ್ಟಿಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಿದ ಸರಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ಜನವರಿ 1ರಿಂದ ಜಾರಿಗೆ ಬರುವಂತೆ ಶೇ. 2.75ರಷ್ಟು ತುಟ್ಟಿಭತ್ಯೆ ಹೆಚ್ಚಿಸಿ ಸರಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಟ್ವೀಟರ್‌ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರಕಾರ ₹1447 ಕೋಟಿ ವಾರ್ಷಿಕ ವೆಚ್ಚ ಭರಿಸಲಿದೆ. ಸರಕಾರಿ ಆದೇಶ ಹೊರಡಿಸಲಾಗುವುದು’ ಎಂದು ಹೇಳಿದ್ದಾರೆ.

ಕರ್ನಾಟಕ ಸರಕಾರ ಆದೇಶ ಹೊರಡಿಸಿದ್ದು, 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ರಾಜ್ಯ ಸರಕಾರಿ ನೌಕರರಿಗೆ ಪಾವತಿಸಬೇಕಾದ ತುಟ್ಟಿಭತ್ಯೆಯ ದರಗಳನ್ನು ಅಸ್ವಿತ್ವದಲ್ಲಿರುವ ಮೂಲ ವೇತನದ ಶೇ. 24.50ರಿಂದ ಶೇ. 27.25ಕ್ಕೆ ಜನವರಿ 1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸುತ್ತದೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!