ಜಾತಿಗಣತಿ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಲಿ: ಮಾಜಿ ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ ಹುಬ್ಬಳ್ಳಿ:

ರಾಜ್ಯ ಸರ್ಕಾರ ಬಿಡುಗಡೆಗೊಳಿಸಲು ಹೊರಟಿರುವುದು ಜಾತಿಗಣತಿ ಹೌದೋ ಅಥವಾ ಅಲ್ಲವೋ ಎಂಬುದರ ಬಗ್ಗೆ ಮೊದಲು ಸ್ಪಷ್ಟನೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಒಂದು ವರದಿ ನೀಡಬೇಕಾದರೆ ಸರ್ಕಾರ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಬೇಕು. ಇದರಿಂದ ಸಮಾಜದ ಮೇಲೆ ಯಾವ ರೀತಿ ಪರಿಣಾಮ ಬಿರಲಿದೆ ಎಂಬುವುದು ಅರಿತುಕೊಳ್ಳುವುದು ಉತ್ತಮ ಎಂದರು.

ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಜಾರಿ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲವೋ ಅನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಹೇಳಿದರು.

ಪ್ಯಾಲೆಸ್ಟೈನ್ ನಲ್ಲಿರುವಂತಹ ಭಯೋತ್ಪಾದಕರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಭಯೋತ್ಪಾದಕರು ಒಂದೇ. ಅಮಾಯಕರು, ಹೆಣ್ಣುಮಕ್ಕಳು, ಮಕ್ಕಳ ಮೇಲೆ ಬಾಂಬ್ ದಾಳಿ ಮಾಡಲಾಗುತ್ತಿದೆ. ಇದನ್ನು ಯಾವುದೇ ಸಮಾಜ ಹಾಗೂ ಸಮುದಾಯ ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತೆ ತುಷ್ಟೀಕರಣದ ರಾಜಕಾರಣಕ್ಕೆ ಇಳಿಯುತ್ತಿದೆ, ಇದು ದೊಡ್ಡ ದುರಂತ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!