Tuesday, February 27, 2024

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ( Thawar chand gehlot ) ಅವರಿಗೆ ಕೊರೋನಾ ಪಾಸಿಟಿವ್ ( Corona Positive ) ದೃಢಪಟ್ಟಿದೆ.

ಕೋವಿಡ್ ಲಕ್ಷಣಗಳನ್ನು ಹೊಂದಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಕೋವಿಡ್ ಪಾಸಿಟಿವ್ ( Covid19 Postive ) ಎಂಬುದಾಗಿ ಪರೀಕ್ಷೆಯ ವರದಿಯಿಂದ ದೃಢಪಟ್ಟ ಕಾರಣ, ಅವರ ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದಿಗೊಳಿಸಿರೋದಾಗಿ ರಾಜ್ಯಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕೋವಿಡ್ ಪಾಸಿಟಿವ್ ಆಗಿರುವಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುಲಿದ್ದಾರೆ ಎಂಬುದಾಗಿಯೂ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!