ಹೊಸದಿಗಂತ ವರದಿ, ಮಂಗಳೂರು
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ಮಂಗಳೂರಿಗೆ ಆಗಮಿಸಿದ್ದು, ಇಲ್ಲಿನ ಕುದ್ರೋಳಿ ಗೋಕರ್ಣನಾಥೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಡಿಸಿಪಿ ಹರಿರಾಂ ಶಂಕರ್ ಹಾಗೂ ಇತರೆ ಅಧಿಕಾರಿಗಳು, ದೇವಸ್ಥಾನದ ಅಧ್ಯಕ್ಷ ಸಾಯಿರಾಂ, ಕಾರ್ಯದರ್ಶಿ ಮಾಧವ ಸುವರ್ಣ ಉಪಸ್ಥಿತರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ