ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ವಿತರಣೆಗೆ ನಿರ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶಾಲೆಗಳಲ್ಲಿ ವಾರಕ್ಕೆ ಎರಡು ಮೊಟ್ಟೆ ವಿತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿಕೊಂಡಿದ್ದೆ. ನನ್ನ ಮನವಿಯನ್ನು ಪರಿಗಣಿಸಿ ಅನುಮೋದನೆ ನೀಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಅದಾಗ್ಯೂ ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ಕೊಡುತ್ತೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!