ಕೆಪಿಟಿಸಿಎಲ್‌ ನೌಕರರಿಗೆ ಗುಡ್‌ ನ್ಯೂಸ್‌ : ಮುಷ್ಕರ ಎಚ್ಚರಿಕೆ ಬೆನ್ನಲೇ ವೇತನ ಪರಿಷ್ಕರಣೆಗೆ ನಿರ್ಧರಿಸಿದ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ನೌಕರ ಸಂಘ ನೀಡಿದ್ದ ಗಡುವು ಇಂದಿಗೆ ಅಂತ್ಯವಾಗಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ (ESCOM) ನೌಕರರ ವೇತನ ಪರಿಷ್ಕರಣೆ ಮಾಡಿದೆ.

2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ ಈಗಿರುವ ವೇತನದ ಮೇಲೆ ಶೇ 20ರಷ್ಟು ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆದ ಕಾರಣ ಕೆಪಿಟಿಸಿಎಲ್​ ನೌಕರರು ನಾಳಿನ ಮುಷ್ಕರನ್ನು ವಾಪಸ್ ಪಡೆದಿದ್ದಾರೆ.

ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ನೌಕರರು ರಾಜ್ಯ ಸರ್ಕಾರಕ್ಕೆ 14 ದಿನಗಳ ಗಡುವು ನೀಡಿತ್ತು. ಅಲ್ಲದೆ ನಾಳೆ (ಮಾ.16) ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕೆಪಿಟಿಸಿಎಲ್​ ನೌಕರರ ಸಂಘ ಕರೆ ಕೊಟ್ಟಿತ್ತು. ಈ ಹಿನ್ನೆಲೆ ಎಲ್ಲಾ ಎಸ್ಕಾಂಗಳು ನೌಕರರು ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲು ನಿರ್ಧರಿಸಿದ್ದರು. ಸುಮಾರು 50 ಸಾವಿರ ನೌಕರರು ನಾಳೆಯ ಮುಷ್ಕರದಲ್ಲಿ ಭಾಗಿಯಾಗಲಿದ್ದರು. ಈ ಹಿನ್ನೆಲೆ ಎಚ್ಚತ್ತ ಸರ್ಕಾರ ಶೇ20 ರಷ್ಟು ನೌಕರರ ವೇತನವನ್ನು ಹೆಚ್ಚಳ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!