ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ವಯೋಮಿತಿ ಹೆಚ್ಚಿಸಿದ ರಾಜ್ಯ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಸರ್ಕಾರ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಖಾಸಗಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ವಯೋಮಿತಿ ಹೆಚ್ಚಳ ಮಾಡಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಪದ್ಮಿನಿ ಎಸ್. ಎನ್. ಸರ್ಕಾರದ ಅಧೀನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ) ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕ ಹುದ್ದೆಗಳ ನೇಮಕಾತಿಗೆ ವಯೋಮಿತಿಯನ್ನು ಹೆಚ್ಚಳ ಮಾಡುವ ಕುರಿತು ಹೇಳಲಾಗಿದೆ.

ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆರವರ ಪತ್ರ 21/10/2022 ಉಲ್ಲೇಖ ಮಾಡಿ ಆದೇಶ ಹೊರಡಿಸಲಾಗಿದೆ. ಮಾನ್ಯ ಶಾಸಕರುಗಳು, ಗಣ್ಯವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳಿಂದ ಸ್ವೀಕೃತಗೊಂಡಿರುವ ಮನವಿಗಳಲ್ಲಿ ಕೋವಿಡ್-19ರ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!