Thursday, March 23, 2023

Latest Posts

ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಪ್ರಶ್ನಿಸಿದ್ದ ಅರ್ಜಿ : ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಾಂವಿಧಾನಿಕ ಸಿಂಧುತ್ವವನ್ನು (ಶಿಕ್ಷಣ ಸಂಸ್ಥೆಗಳಲ್ಲಿ ಸೀಟುಗಳು ಮತ್ತು ನೇಮಕಾತಿಗಳ ಮೀಸಲಾತಿ) ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ
ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರಿನಲ್ಲಿ ಕಾನೂನು ವ್ಯಾಸಂಗ ಮಾಡುತ್ತಿರುವ ಕಲಬುರಗಿಯ ದುಗ್ನೂರ ಮೂಲದ ಮಹೇಶ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ.

ಹೊಸ ಶಾಸನವು ಪರಿಶಿಷ್ಟ ಜಾತಿಗಳಿಗೆ ಒದಗಿಸಲಾದ ಮೀಸಲಾತಿಯನ್ನು ಈಗಿರುವ ಶೇಕಡಾ 15 ರಿಂದ ಶೇಕಡಾ 17 ಕ್ಕೆ ಹೆಚ್ಚಿಸಲು ಪ್ರಯತ್ನಿಸುತ್ತದೆ ಮತ್ತು ಪರಿಶಿಷ್ಟ ಪಂಗಡಗಳಿಗೆ ಒದಗಿಸಲಾದ ಮೀಸಲಾತಿಯನ್ನು ಶೇಕಡಾ 3 ರಿಂದ 7 ಕ್ಕೆ ಹೆಚ್ಚಿಸುತ್ತದೆ.

ಮೀಸಲಾತಿ ಹೆಚ್ಚಳ ಮಾಡಿರುವ ಕ್ರಮ ಸಂವಿಧಾನದ ಪರಿಚ್ಛೇದ 14, 15 ಮತ್ತು 16ರ ಉಲ್ಲಂಘಿಸಿದಂತಾಗಿದೆ. ಅಲ್ಲದೇ ಇಂದಿರಾ ಸಹಾನಿ ಪ್ರಕರಣದಲ್ಲಿ ಶೇ. 50ರಷ್ಟು ಮೀಸಲಾತಿ ಮೀರಬಾರದು ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ತದ್ವಿರುದ್ಧವಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!