WEATHER | ರಾಜ್ಯದ ಹಲವೆಡೆ ಮೂರು ದಿನಗಳ ಕಾಲ ಭಾರೀ ಮಳೆ, ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಜೋರು ಮಳೆಯಾಗಲಿದ್ದು, ಎಂಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಗಾಲದಂತೆ ಜಿಟಿ ಜಿಟಿ ಮಳೆ ಸುರಿಯುತ್ತಲೇ ಇದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್‌ಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ವಿಜಯಪುರ, ಕೊಪ್ಪಳ ಹಾಗೂ ಗದಗ ಜಿಲ್ಲೆಗೆ ಮಾತ್ರ ವರುಣದ ದರುಶನ ಇಲ್ಲ. ಈ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
Copy and paste this URL into your WordPress site to embed
Copy and paste this code into your site to embed