RECRUITMENT | ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 39 ಡ್ರೈವರ್‌ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 39 ಡ್ರೈವರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಜೊತೆಗೆ ಏಪ್ರಿಲ್‌ 6,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಡ್ರೈವರ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಅಥವಾ ಚಲನ್‌ ಮೂಲಕ ಪಾವತಿಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಏಪ್ರಿಲ್‌ 6,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!