RECRUITMENT | ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಿವಿಲ್ ನ್ಯಾಯಾಧೀಶ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 57 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕಾನೂನು ಪದವಿ ವಿದ್ಯಾರ್ಹತೆ ಮತ್ತು ಏಪ್ರಿಲ್‌ 10,2023ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,700/- ರಿಂದ 44,770/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 500/-ರೂ ಶುಲ್ಕವನ್ನು ಆನ್‌ಲೈನ್‌ ಅಥವಾ ಚಲನ್‌ ಮೂಲಕ ಪಾವತಿಸಬೇಕಿರುತ್ತದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿದಾರರು ಆನ್‌ಲೈನ್‌ ಮೂಲಕ ಏಪ್ರಿಲ್‌ 10,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!