ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 13 ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ಉಚ್ಚ ನ್ಯಾಯಾಲಯ 13 ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 25ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಈ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಕಾನೂನು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಫೆಬ್ರವರಿ 25,203ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://karnatakajudiciary.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 25,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!