ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಹಾಗೂ ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಅದನ್ನು ಒಪ್ಪಲ್ಲ ಎಂದು ನಟಿ ಸುಧಾರಾಣಿ ಹೇಳಿದ್ದಾರೆ.
ನಟ ಕಮಲ್ ಹಾಸನ್ ಅವರ `ತಮಿಳಿನಿಂದಲೇ ಕನ್ನಡ ಹುಟ್ಟಿದ್ದು’ ಎಂಬ ಹೇಳಿಕೆ ರಾಜ್ಯದಲ್ಲಿ ತ್ರೀವ ಆಕ್ರೋಶ ಹುಟ್ಟುಹಾಕಿದೆ. ಈ ಹೇಳಿಕೆ ಸಂಬಂಧ ಮಾತನಾಡಿದ ಅವರು, ನಮ್ಮ ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಹೇಳಿದರೂ ಅದನ್ನು ಒಪ್ಪಿಕೊಳ್ಳಲು ಆಗುವುದಿಲ್ಲ. ಆ ಸಮಯದಲ್ಲಿ ಖಂಡಿತವಾಗಿ ನಾವು ಎಲ್ಲರೂ ಒಟ್ಟಿಗೆ ನಿಂತೇ ನಿಲ್ಲುತ್ತೇವೆ. ಆದರೆ ಅವತ್ತು ಅಲ್ಲಿ ಏನು ನಡೆಯಿತು ಎಂದು ನಿಜಕ್ಕೂ ನನಗೆ ಗೊತ್ತಿಲ್ಲ. ದಯವಿಟ್ಟು ಆ ಬಗ್ಗೆ ಕೇಳಬೇಡಿ, ನಾನು ಮಾತನಾಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.