ಈ ಜಿಲ್ಲೆಗಳಲ್ಲಿ ಮತ್ತೆ ಸುರಿಯಲಿದೆ ಮಳೆ; ಹವಾಮಾನ ಇಲಾಖೆಯ ಮಾಹಿತಿ ಇಲ್ಲಿದೆ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಮುಂದಿನ ಒಂದೆರಡು ದಿನಗಳಲ್ಲಿ ಮತ್ತೆ ಬಂಗಾಳಕೂಲ್ಲಿಯಲ್ಲಿ ವಾಯುಭಾರ ಕುಸಿತಗೊಳ್ಳುವ ಎಲ್ಲಾ ಸಾಧ್ಯತೆಗಳು ಕಾಣಿಸಿವೆ.
ಆದರೆ ಇದು ನಿರೀಕ್ಷಿತ ಮಟ್ಟದಲ್ಲಿ ಪ್ರಭಾವ ಬೀರದು ಹಾಗೂ ಚಂಡಮಾರುತವಾಗಿ ಮಾರ್ಪಾಡುವ ಸಾಧ್ಯತೆಯೂ ಕಡಿಮೆ ಎಂದು ತಜ್ಞರು ಊಹಿಸಿದ್ದಾರೆ. ಏ.7ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕೊಡಗು, ಆಗುಂಬೆ, ಶ್ಗೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರದ ಸುತ್ತಮುತ್ತ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆ ನಿರೀಕ್ಷಿಸಲಾಗಿದೆ.
ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!