Friday, September 30, 2022

Latest Posts

ಆತ್ಮಹತ್ಯೆ ಪ್ರಮಾಣ ಹೆಚ್ಚಿರೋ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಅತಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ವರದಿಯಾಗಿರುವ ಮೊದಲ ಐದು ರಾಜ್ಯಗಳ ಪೈಕಿ ಕರ್ನಾಟಕ ಕೂಡ ಸ್ಥಾನ ಪಡೆದಿದೆ.
ಭಾರತದಲ್ಲಿ ಆತ್ಮಹತ್ಯೆಗಳು 2021 ವರದಿ ಪ್ರಕಾರ ನಾನಾ ಕಾರಣಗಳಿಂದಾಗ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿವೆ. ಕೌಟುಂಬಿಕ ಸಮಸ್ಯೆ, ಪ್ರೇಮ ಪ್ರಕರಣ, ಅನಾರೋಗ್ಯ, ನಿರುದ್ಯೋಗ, ಖಿನ್ನತೆ ಈ ಎಲ್ಲ ಕಾರಣಗಳಿಂದಾಗಿ ರಾಜ್ಯದಲ್ಲಿ 13,056 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಕಳೆದ ಐದು ವರ್ಷಗಳಲ್ಲಿ 1.64ಲಕ್ಷ ಪ್ರಕರಣಗಳು ಹೆಚ್ಚಾಗಿವೆ.

ಆತ್ಮಹತ್ಯೆ ತಡೆಗಟ್ಟುವಿಕೆಗೆ ಮಾನಸಿಕ ಆರೋಗ್ಯ ಅತಿಮುಖ್ಯವಾಗಿದೆ. ಇದರ ಬಗ್ಗೆ ಹೆಚ್ಚಿನ ಅರಿವು ಅಗತ್ಯ ಎಂದು ನಿಮ್ಹಾನ್ಸ್‌ನ ಮನೋವೈದ್ಯಶಾಸ್ತ್ರ ವಿಭಾಗದ ಡಾ. ಶಿವರಾಮ ವಾರಂಬಳ್ಳಿ ಅವರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!