April 2, 2026
Thursday, April 2, 2026
spot_img

ಗ್ರಾಮ ಪಂಚಾಯತಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ನಂಬರ್ 1: ಸಚಿವ ಪ್ರಿಯಾಂಕ್ ಖರ್ಗೆ ಸಂಭ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯು ತೆರಿಗೆ ಸಂಗ್ರಹಣೆಯಲ್ಲಿ ಸತತ ಎರಡನೇ ವರ್ಷವೂ ಐತಿಹಾಸಿಕ ಸಾಧನೆ ಮಾಡಿದೆ.

ರಾಜ್ಯದ 5,943 ಗ್ರಾಮ ಪಂಚಾಯತಿಗಳು ಈ ಬಾರಿ ಬರೋಬ್ಬರಿ 1382.57 ಕೋಟಿ ರೂ. ತೆರಿಗೆ ಸಂಗ್ರಹಿಸುವ ಮೂಲಕ ಶೇ. 89ರಷ್ಟು ಪ್ರಗತಿ ಸಾಧಿಸಿವೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 110.04 ಕೋಟಿ ರೂ. ಅಧಿಕ ಮೊತ್ತದ ಕಂದಾಯ ಕ್ರೋಡೀಕರಣವಾಗಿದೆ ಎಂದು ತಿಳಿಸಿದ್ದಾರೆ.

ದಕ್ಷ ಆಡಳಿತ ಮತ್ತು ಸುಧಾರಿತ ತೆರಿಗೆ ವ್ಯವಸ್ಥೆಯಿಂದಾಗಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ಮೊದಲ ಸ್ಥಾನ ಕಾಯ್ದುಕೊಂಡಿದೆ. 2024-25ರಲ್ಲಿ ಶೇ. 80ರಷ್ಟು ತೆರಿಗೆ ವಸೂಲಿ ಮಾಡಲಾಗಿದ್ದರೆ, ಪ್ರಸಕ್ತ ಸಾಲಿನಲ್ಲಿ ಈ ಪ್ರಮಾಣ ಶೇ. 89ಕ್ಕೆ ಏರಿಕೆಯಾಗಿರುವುದು ಇಲಾಖೆಯ ಇತಿಹಾಸದಲ್ಲೇ ದೊಡ್ಡ ದಾಖಲೆಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !