ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಟೆಕ್ ಶೃಂಗಸಭೆಯ 27 ನೇ ಆವೃತ್ತಿಯಲ್ಲಿ ಇನ್ಫೋಸಿಸ್ ಕರ್ನಾಟಕ ಐಟಿ ರತ್ನ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಐಟಿ ರತ್ನ ಪ್ರಶಸ್ತಿಯನ್ನು ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್‌ಟಿಪಿಐ) ನೀಡುತ್ತದೆ ಮತ್ತು ರಫ್ತುಗಳಲ್ಲಿ 10,000 ಕೋಟಿ ರೂ.ಗಿಂತ ಹೆಚ್ಚು ಕ್ಲಿಕ್ ಮಾಡಿದ ಕಂಪನಿಗಳಿಗೆ ನೀಡಲಾಗುತ್ತದೆ.
ಅತ್ಯುತ್ತಮ ಸಾಧನೆ ಮಾಡಿರುವ ಇನ್ಫೋಸಿಸ್ ಕಂಪನಿಗೆ ‘ಕರ್ನಾಟಕದ ಐಟಿ ರತ್ನ’, ಅತ್ಯುತ್ತಮ ಐಟಿ ರಫ್ತು ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ರಾಬರ್ಟ್ ಬಾಷ್, ಇಂಟೆಲ್ ಮುಂತಾದ ಕಂಪನಿಗಳಿಗೆ ಎಸ್.ಟಿ.ಪಿ.ಐ-ಐಟಿ ಪ್ರಶಸ್ತಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರದಾನ ಮಾಡಿದರು. ಅಮೆಜಾನ್ ಡೆವಲಪ್ಮೆಂಟ್ ಸೆಂಟರ್, ಜೆ.ಪಿ.ಮಾರ್ಗನ್ ಸರ್ವೀಸಸ್, ಗೋಲ್ಡನ್ ಸ್ಯಾಕ್ಸ್, ಸ್ಯಾಮ್ಸಂಗ್ ಆರ್ ಆ್ಯಡ್ ಡಿ, ಕ್ವಾಲ್ಕಾಂ ಇಂಡಿಯಾ, ಸ್ನೀಡರ್ ಎಲೆಕ್ಟ್ರಿಕ್, ಅಲ್ಟ್ರಾನ್ ಟೆಕ್ ಇಂಡಿಯಾ, ಸ್ಯಾಪ್ ಲ್ಯಾಬ್ಸ್, ವಿಎಂವೇರ್ ಸಾಫ್ಟ್ವೇರ್ಸ್, ಆಕ್ಸೆಂಚರ್ ಸೊಲ್ಯೂಷನ್ಸ್ ಪರವಾಗಿ ಸಂಸ್ಥೆಗಳ ಉನ್ನತಾಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದರು.