Saturday, October 1, 2022

Latest Posts

ವಿದುಷಿ ಹರ್ಷಿತಾಳಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಆರ್ ಎನ್ ಎಸ್ ಪದವಿಪೂರ್ವ ಕಾಲೇಜು ಮತ್ತು ಜ್ಞಾನಮಂದಾರ ಶಿಕ್ಷಣ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಡೆಯುವ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬದಿಯಡ್ಕ ಸಮೀಪದ ಕನಕಪ್ಪಾಡಿಯ ವಿದುಷಿ ಹರ್ಷಿತಾ ಎನ್. ಇವರಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ ನೀಡಲಾಗುವುದು. ನೂತನವಾಗಿ ನಿರ್ಮಾಣವಾಗಿರುವ ಡಾ.ಆರ್.ಎನ್.ಶೆಟ್ಟಿಯವರ ಕನಸಿನ ಕೂಸು ಸಭಾಂಗಣದಲ್ಲಿ ಸೆ.೨೨ರಂದು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿ.ವಿ.ಉಪಕುಲಪರಿಗಳಾದ ಡಾ. ಪಿಎಸ್ ಎಡಪಡಿತ್ತಾಯ, ಗೌರವಾನ್ವಿತ ಅತಿಥಿಗಳಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಆರ್. ಎನ್. ಎಸ್. ಮುಖ್ಯ ಆಡಳಿತಾಧಿಕಾರಿ ಡಾ. ಸುಧೀರ್ ಪೈ ಕೆ.ಎಲ್. ಅಧ್ಯಕ್ಷತೆ ವಹಿಸಲಿದ್ದಾರೆ. ವಿದುಷಿ ಹರ್ಷಿತಾ ಇವರು ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಪುತ್ತೂರು ಇವರ ಶಿಷ್ಯಯಾಗಿದ್ದಾರೆ. ಪ್ರಸ್ತುತ ಮಂಗಳೂರು ಫಾದರ್ ಮುಲ್ಲರ್‍ಸ್ ಕಾಲೇಜಿನಲ್ಲಿ ಹೋಸ್ಪಿಟಲ್ ಎಡ್ಮಿನಿಸ್ಟ್ರೇಶನ್ ಕೋರ್ಸ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬದಿಯಡ್ಕ ಕನಕಪ್ಪಾಡಿಯ ಭಾಸ್ಕರ ಹಾಗೂ ರಾಜೇಶ್ವರಿ ಇವರ ಪುತ್ರಿಯಾಗಿದ್ದಾಳೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!