April 12, 2026
Sunday, April 12, 2026
spot_img

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನ ಪರಿಷತ್ತಿನ ಖಾಲಿ ಇರುವ ಸ್ಥಾನಗಳ ಚುನಾವಣೆಗೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಒಟ್ಟು ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಪ್ರಮುಖವಾಗಿ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಮಾಜಿ ಸದಸ್ಯ ಸುಶೀಲ್ ನಮೋಶಿ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ, ಪೂರ್ವ ಪದವೀಧರ ಕ್ಷೇತ್ರಕ್ಕೆ ಹಿರಿಯ ನಾಯಕ ಎಸ್.ವಿ. ಸಂಕನೂರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಹಾಗೆಯೇ, ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಕೆ.ಎಂ. ಸುರೇಶ್ ಅವರಿಗೆ ಟಿಕೆಟ್ ಘೋಷಿಸುವ ಮೂಲಕ ಬಿಜೆಪಿ ಹೊಸಬರಿಗೂ ಆದ್ಯತೆ ನೀಡಿದೆ.

ಈ ಘೋಷಣೆಯೊಂದಿಗೆ ಬಿಜೆಪಿ ತನ್ನ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿದ್ದು, ಪದವೀಧರರು ಮತ್ತು ಶಿಕ್ಷಕರ ಬೆಂಬಲ ಗಳಿಸಲು ತಂತ್ರ ರೂಪಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !