ನಾಳೆಯಿಂದ ವಿಧಾನಮಂಡಲ ಅಧಿವೇಶನ: ಮೊದಲ ದಿನ ರಾಜ್ಯಪಾಲರ ಭಾಷಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸೋಮವಾರದಿಂದ ರಾಜ್ಯದಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ.
ಮೊದಲ ದಿನ ಫೆ.14ರಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಾಳೆಯಿಂದ 10 ದಿನಗಳ ಕಾಲ ನಡೆಯಲಿರುವ ಕಲಾಪದಲ್ಲಿ ಮೇಕೆದಾಟು ಯೋಜನೆ, ನದಿ ಜೋಡಣೆ, ಬೆಲೆ ವಿಮೆ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಗುತ್ತದೆ.
ಹಿಂದಿನ ರಾಜಕಾರಣ ಹಾಗೂ ಇಂದಿನ ಚುನಾವಣೆ ಕುರಿತು ವ್ಯವಹಾರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ಸದನದಲ್ಲಿ ಚರ್ಚಿಸಲು ನಿರ್ಧರಿಸಲಾಗುತ್ತದೆ.
ರಾಜ್ಯಸಭೆ ಮಾದರಿಯಲ್ಲೇ ನಮ್ಮ ಮೇಲ್ಮನೆ ಕಲಾಪ ನಡೆಸಲು ಯೋಜಿಸಲಾಗುತ್ತಿದ್ದು, ಹಲವು ಪದ್ಧತಿಗಳನ್ನು ಅಳವಡಿಸಿಕೊಳ್ಳಲಾಗುತ್ತದೆ.
ಇನ್ನು ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬಿರುವ ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದದ ಬಗ್ಗೆಯೂ ಕಲಾಪದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!