ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹೀನಾಯ ಸೋಲು ಕಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ. ಹಾಸನ ಕ್ಷೇತ್ರ 25 ವರ್ಷಗಳ ನಂತರ ಕಾಂಗ್ರೆಸ್ ಕೈಗೆ ಸೇರಿದೆ.
1999 ರಲ್ಲಿ ದೇವೇಗೌಡರನ್ನು ಸೋಲಿಸಿದ ಪುಟ್ಟಸ್ವಾಮಿಗೌಡರ ಮೊಮ್ಮಗನಿಂದ ದೇವೇಗೌಡರ ಮೊಮ್ಮಗನಿಗೆ ಸೋಲು.