ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಚುನಾವಣೆಯಲ್ಲಿ ಯಾರು ಗೆಲ್ತಾರೆ? ಯಾರು ಸೋಲ್ತಾರೆ? ಎಂಬ ಪ್ರಶ್ನೆಗೆ ಉತ್ತರ ಸಿಗುವ ಸಮಯ ಬಂದಿದೆ. ಲೋಕಸಭೆ ಚುನಾವಣೆಯ ಬಹು ನಿರೀಕ್ಷಿತ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಮತದಾನ ಮಾಡಿದ ಮತದಾರರು ಹಾಗೂ ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ 26 ರಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆದಿತ್ತು, ದಕ್ಷಿಣ ಕರ್ನಾಟಕದಲ್ಲಿ ಬಿರುಸಿನ ಪ್ರಚಾರ ನಡೆಸಲಾಯಿತು, ಇಂದು ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.