ಹೊಸದಿಗಂತ ಕಾಸರಗೋಡು:
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಐಕ್ಯರಂಗದ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 90,817 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ. ಎಡರಂಗದ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 76,358 ಮತಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಎನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಪಜ್ವ 43,663 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಸದ್ಯದ ಲೆಕ್ಕಾಚಾರದಂತೆ ಹಾಲಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ 14,459 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.