ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿದು ಇದೇ 23ರಂದು ಸುಪ್ರೀಂ ಕೋರ್ಟ್‌ನಲ್ಲಿ ಅಂತಿಮ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಭೆ ನಡೆಯಲಿದ್ದು, ಬಿಜೆಪಿ, ಶಿವಸೇನೆ, ಎನ್‌ಸಿಪಿ ಹಾಗೂ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.
ಕಳೆದ 19 ವರ್ಷಗಳಿಂದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ವಿಚಾರಣೆ ನಡೆಯುತ್ತಲೇ ಇದೆ. ನ.23 ರಂದು ಅಂತಿಮ ವಿಚಾರಣೆ ನಡೆಯಲಿದೆ. ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ-ಮಹಾರಾಷ್ಟ್ರದ ಗಡಿ ವಿವಾದ ತನ್ನ ವ್ಯಾಪ್ತಿಗೆ ಬರುತ್ತದೋ ಇಲ್ಲವೋ ಎನ್ನುವ ಬಗ್ಗೆ ವಿಚಾರಣೆ ನಡೆಯಲಿದೆ. ವಿಚಾರಣೆ ಕೈಗೆತ್ತಿಕೊಳ್ಳಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಸುಪ್ರೀಂ ನಿರ್ಧಾರಕ್ಕೆ ಬರಲಿದೆ.