ಹೊಸದಿಗಂತ ಡಿಜಿಟಲ್ ಡೆಸ್ಕ್
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಹೆಚ್ಚುತ್ತಿದ್ದು, ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಹೀಗಾಗಿ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲಿಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೆ ಎಸ್ ಆರ್ ಟಿ ಸಿ ಬಸ್ ಗಳ ಮೇಲೆ ಮಹಾರಾಷ್ಟ್ರದ ಮೀರಜ್ ನಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ಬೆಳಗಾವಿ ಪೊಲೀಸರು ಮುಂಜಾಗೃತಾ ಕ್ರಮವಾಗಿ ಮೀರಜ್ ಹಾಗೂ ಕಾಗವಾಡ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚ ವಹಿಸುವಂತೆ ಸೂಚಿಸಿದ್ದಾರೆ.