ಗಡಿ ವಿವಾದ-ಕರ್ನಾಟಕ, ಮಹಾರಾಷ್ಟ್ರ ಸಿಎಂ ಜೊತೆಗೆ ಅಮಿತ್‌ ಶಾ ಮಾತುಕತೆ ಬಹಿರಂಗವಾಗಬೇಕು:ಅಜಿತ್ ಪವಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಕರ್ನಾಟಕ ಮತ್ತು ಮಹಾರಾಷ್ಟ್ರ ಸಿಎಂಗಳ ಮಾತುಕತೆಯನ್ನು ಸಾರ್ವಜನಿಕಗೊಳಿಸಬೇಕು ಎಂದು ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಆಗ್ರಹಿಸಿದರು.
ರಾಜ್ಯ ಸರ್ಕಾರವು ಗಡಿ ಸಮಸ್ಯೆಗಳ ಕುರಿತು ಪ್ರಸ್ತಾವನೆಗಳನ್ನು ತಂದರೆ ನಾವು ಅದನ್ನು ಬೆಂಬಲಿಸುತ್ತೇವೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮತ್ತು ಇತರ ಗಡಿ ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ ಸೇರಿಸಬೇಕು ಎಂಬುದು ನಮ್ಮ ಹಳೆಯ ಬೇಡಿಕೆ ಎಂದರು.

ಏತನ್ಮಧ್ಯೆ, “ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ನಾವು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಅಂಗೀಕರಿಸುತ್ತೇವೆ. ಸಿಎಂ ಏಕನಾಥ್ ಶಿಂಧೆ ಅವರು ವಿಧಾನಸಭೆಯಲ್ಲಿ ಪ್ರಸ್ತಾವನೆಯನ್ನು ಮಂಡಿಸಲಿದ್ದಾರೆ” ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಈ ನಡುವೆ ಡಿಸೆಂಬರ್ 14 ರಂದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಸಭೆ ನಡೆಸಿದರು.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸುಪ್ರೀಂ ಕೋರ್ಟ್ ತೀರ್ಪು ನೀಡುವವರೆಗೆ ಉಭಯ ರಾಜ್ಯಗಳು ಯಾವುದೇ ರೀತಿಯ ಪರಸ್ಪರ ಹಕ್ಕು ಸಾಧಿಸುವಂತಿಲ್ಲ ಎಂದರು. ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ವಿಚಾರವಾಗಿ ಇಂದು ನಡೆದ ಸಭೆ ಸಕಾರಾತ್ಮಕ ವಾತಾವರಣದಲ್ಲಿ ನಡೆದಿದೆ ಎಂದು ಶಾ ಹೇಳಿದ್ದಾರೆ. ಎರಡೂ ರಾಜ್ಯಗಳ ವಿರೋಧ ಪಕ್ಷಗಳು ಈ ವಿಷಯವನ್ನು “ರಾಜಕೀಯ” ಮಾಡಬಾರದು ಎಂದು ಶಾ ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಇದೀಗ ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳೆರಡೂ ಪ್ರಕರಣವನ್ನು ತ್ವರಿತಗೊಳಿಸುವಂತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಪ್ರಕರಣ ಇನ್ನೂ ಬಾಕಿ ಉಳಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!