ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್​ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

ಸುನೀಲ್ ಪುರಾಣಿಕ್​ರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಕಶ್ಯಪ್ ನೇಮಕವಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷದ ಅವಧಿಗೆ , ಸರ್ಕಾರದ ಮುಂದಿನ ಆದೇಶದವರೆಗೆ ಅಶೋಕ್ ಕಶ್ಯಪ್ ನೇಮಿಸಿ ಆದೇಶಿಸಲಾಗಿದೆ.

ಅಶೋಕ್ ಕಶ್ಯಪ್ ಕನ್ನಡದ ಹಲವಾರು ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದರು. ಅವರು ‘ಲಿಫ್ಟ್ ಕೊಡ್ಲಾ’, ‘ಧ್ವಜ’ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಅಶೋಕ್ ಅವರು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!