ಕರ್ನಾಟಕ ಮುಜರಾಯಿ ದೇಗುಲಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ದೇವಸ್ಥಾನ ಆವರಣದ ಒಳಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ದೇಗುಲಗಳ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧರಿಸುತ್ತವೆ ಎಂದು ತಿಳಿಸಿದರು. ಪರಿಸರ ಸ್ವಚ್ಛತೆ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೊಳಿಸಲಾಗುತ್ತಿದೆ. ಒಂದು ವೇಳೆ ಇದನ್ನು ಉಲ್ಲಂಘಿಸುವುದು ಕಂಡು ಬಂದರೆ ದಂಡ ವಿಧಿಸುವಂತೆ ದೇಗುಲಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!