ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

‘ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳಲ್ಲಿ ಕರ್ನಾಟಕ ನಂ.1′: ಸಂತಸ ಹೊರ ಹಾಕಿದ ಸಚಿವ ಡಾ. ಕೆ.ಸುಧಾಕರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

‘ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳಲ್ಲಿ ಕರ್ನಾಟಕ ನಂ.1′ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವಿಟರ್ ಮೂಲಕ ಸಂತಸ ಹೊರ ಹಾಕಿದ್ದಾರೆ.
ಕೇಂದ್ರ ಸರ್ಕಾರ ನಡೆಸಿದ ಅಂಕಿ ಅಂಶಗಳಲ್ಲಿ ರಾಜ್ಯವೇ ಪ್ರಥಮ ಸ್ಥಾನ ಪಡೆದಿದೆ ಎಂದು ಮಾಹಿತಿ ನೀಡಿದರು.
ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕದ ಯೋಜನೆ ಅನುಷ್ಠಾನದಲ್ಲಿ ಹೆಲ್ತ್ ಆಯಂಡ್ ವೆಲ್‌ನೆಸ್ ಕೇಂದ್ರಗಳ (ಹೆಚ್‌ಡಬ್ಲ್ಯುಸಿ) ಅನುಷ್ಠಾನದಲ್ಲಿ ಕರ್ನಾಟಕ ಇಡೀ ದೇಶದಲ್ಲೇ ಅತ್ಯುತ್ತಮ ರಾಜ್ಯವಾಗಿ ಹೊರಹೊಮ್ಮಿದೆ. ಈ ಮಹೋನ್ನತ ಸಾಧನೆಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಾನು ಪ್ರಶಂಸಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ವಹಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss