ಕರ್ನಾಟಕ ಭೇಟಿಗೆ ತೆರೆ: ದೆಹಲಿಯತ್ತ ಪ್ರಯಾಣ ಬೆಳೆಸಿದ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಹೊಸ ಇತಿಹಾಸ ಬರೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಪ್ರವಾಸ ಮುಕ್ತಾಯಗೊಂಡಿದ್ದು, ಅವರು ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸಾಗಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಂಗಳವಾರ 8 ನೇ ಅಂತರಾಷ್ಟ್ರೀಯ ಯೋಗ ದಿನಾಚಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ರಾಜ್ಯದಲ್ಲಿ 33 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ ನೀಡಿದ್ದರು. ಅಲ್ಲದೆ ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಸಮಗ್ರ ಡಿಜಿಟಲ್ ಯೋಗ ಪ್ರದರ್ಶನ ವೀಕ್ಷಣೆ, ವಸ್ತು ಸಂಗ್ರಹಾಲಯ ಉದ್ಘಾಟನೆ, ಮೊದಲಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.
ಇದಲ್ಲದೆ ರಾಜಮಾತೆ ಪ್ರಮೋದಾ ದೇವಿ ಆಹ್ವಾನದಂತೆ ಮೈಸೂರು ಅರಮನೆಯಲ್ಲಿ ಉಪಹಾರವನ್ನೂ ಸೇವಿಸಿದ್ದರು. ಮೈಸೂರು ಅರಮನೆಯಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ, ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!