April 10, 2026
Friday, April 10, 2026
spot_img

ಅಮೆರಿಕದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ: ಆತಂಕದಲ್ಲಿ ಪೋಷಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಮೂಲದ ವಿದ್ಯಾರ್ಥಿಯೊಬ್ಬರು ಅಮೆರಿಕಾದಲ್ಲಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ.

24 ವರ್ಷದ ಸಾಕೇತ್ ಶ್ರೀನಿವಾಸಯ್ಯ ಎಂಬ ವಿದ್ಯಾರ್ಥಿ ಕ್ಯಾಲಿಫೋರ್ನಿಯಾದ University of California, Berkeley ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಫೆಬ್ರವರಿ 12ರಂದು ಲೇಕ್ ಅಂಜಾ ಬಳಿ ಕೊನೆಯದಾಗಿ ಕಾಣಿಸಿಕೊಂಡ ಬಳಿಕ ಅವರ ಸುಳಿವು ಸಿಕ್ಕಿಲ್ಲ.

ಕೆರೆ ದಡದಲ್ಲಿ ಅವರ ಬಟ್ಟೆ, ಪಾದರಕ್ಷೆ ಹಾಗೂ ವೈಯಕ್ತಿಕ ವಸ್ತುಗಳು ಪತ್ತೆಯಾಗಿದ್ದು, ಅವರು ಈಜಲು ನೀರಿಗೆ ಇಳಿದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಪೊಲೀಸರು, ಪಾರ್ಕ್ ಸಿಬ್ಬಂದಿ ಹಾಗೂ ನುರಿತ ಡೈವರ್‌ಗಳು ಸೇರಿ ಕೆರೆಯಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ. ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕವೂ ಪರಿಶೀಲನೆ ಮುಂದುವರಿದಿದೆ.

ಇದನ್ನೂ ಓದಿ:

ಇದಕ್ಕೆ ಮಧ್ಯಪ್ರವೇಶಿಸಿರುವ Consulate General of India, San Francisco ಅಧಿಕಾರಿಗಳು ಸ್ಥಳೀಯ ಪೊಲೀಸ್ ಮತ್ತು ವಿಶ್ವವಿದ್ಯಾಲಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಕುಟುಂಬಕ್ಕೆ ಅಗತ್ಯ ನೆರವು ನೀಡುತ್ತಿದ್ದಾರೆ. ಮಗನ ನಾಪತ್ತೆ ಸುದ್ದಿ ತಿಳಿದು ಕುಟುಂಬಸ್ಥರು ದುಃಖದಲ್ಲಿದ್ದು, ಶೀಘ್ರವೇ ಸುರಕ್ಷಿತವಾಗಿ ಪತ್ತೆಯಾಗಲೆಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !