Wednesday, August 10, 2022

Latest Posts

ದೇಶದಲ್ಲಿಯೇ ಕರ್ನಾಟಕ ಪೊಲೀಸ್ ಪಡೆ ಅತ್ಯಂತ ವಿಶ್ವಾಸಾರ್ಹ, ದಕ್ಷ ಪಡೆ: ಸಿಎಂ ಯಡಿಯೂರಪ್ಪ ಶ್ಲಾಘನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕರ್ನಾಟಕ ಪೊಲೀಸ್ ಪಡೆ ಅತ್ಯಂತ ವಿಶ್ವಾಸಾರ್ಹ ಮತ್ತು ದಕ್ಷ ಪೊಲೀಸ್ ಪಡೆ ಎಂದು ಇಡೀ ದೇಶದಲ್ಲಿ ಹೆಸರಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪೊಲೀಸರು ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ, ಅಪರಾಧಿಗಳನ್ನು ಪತ್ತೆ ಮಾಡುವ ಗುರುತರ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ ಸಮಾಜದ ನೆಮ್ಮದಿಗೆ ಕಾರಣರಾಗಿದ್ದಾರೆ. ತಮ್ಮ ವೈಯಕ್ತಿಕ ಜೀವನವನ್ನು ಬದಿಗಿರಿಸಿ ಕರ್ತವ್ಯಪರತೆ ಮರೆಯುವ ಸಿಬ್ಬಂದಿ, ತಮ್ಮ ದಕ್ಷತೆ, ಪ್ರಾಮಾಣಿಕತೆಯನ್ನು ಸಾಬೀತು ಮಾಡಿದ್ದಾರೆ ಎಂದರು.
ಇತ್ತೀಚಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲು, ತನಿಖೆಯ ನಿಖರತೆಯನ್ನು ಹೆಚ್ಚಿಸಲು ಹಾಗೂ ಅಪರಾಧ ಪ್ರಕರಣಗಳನ್ನು ಸಾಬೀತುಪಡಿಸಲು ಸ್ಥಳದಲ್ಲಿರುವ ಸಾಕ್ಷಿಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ. ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ, ಸಾಕ್ಷಿ ಸಂಗ್ರಹಣೆಗೆ ಸೀನ್ ಆಫ್ ಕ್ರೈಂ ಅಧಿಕಾರಿಗಳ ಹುದ್ದೆ ಸೃಷ್ಟಿಸಿ 206 ಅಧಿಕಾರಿಗಳನ್ನು ನೇಮಕ ಮಾಡಲು ಸರ್ಕಾರ ಮಂಜೂರಾತಿ ನೀಡಿದೆ ಎಂದು ಹೇಳಿದರು.
ಪೊಲೀಸ್ ಇಲಾಖೆ ಅಭಿವೃದ್ಧಿ ಜೊತೆಗೆ ಸಿಬ್ಬಂದಿಯ ಕ್ಷೇಮಾಭಿವೃದ್ಧಿ ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಸಿಬ್ಬಂದಿ ಮತ್ತು ಕುಟುಂಬದ ಸದಸ್ಯರು ಉತ್ತಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಚಿಕಿತ್ಸಾ ವೆಚ್ಚ ಭರಿಸಲು ಸರ್ಕಾರ ಆರೋಗ್ಯ ಯೋಜನೆ ಅನುಷ್ಠಾನಗೊಳಿಸಿದೆ. ಅದೇ ರೀತಿ ಪೊಲೀಸ್ ಸಿಬ್ಬಂದಿ ಮಕ್ಕಳಿಗೆ ಉತ್ತಮ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವ ಜತೆಗೆ ಆರ್ಥಿಕ ಹೊರೆಯನ್ನು ತಗ್ಗಿಸಲು ಪೊಲೀಸ್ ವಿದ್ಯಾನಿಧಿ ಯೋಜನೆ ರೂಪಿಸಲಾಗಿದೆ .

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss