ಹೊಸದಿಗಂತ ಡಿಜಿಟಲ್ ಡೆಸ್ಕ್:
2023-24ನೇ ಸಾಲಿನ ಕರ್ನಾಟಕ ಲೋಕಸೇವಾ ಆಯೋಗ ಗೆಜೆಟ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ.
ಮಾರ್ಚ್ 28, 29 ಮತ್ತು ಏಪ್ರಿಲ್ 1, 2ರಂದು ನಡೆಸುವುದಾಗಿ ಕರ್ನಾಟಕ ಲೋಕಸೇವಾ ಆಯೋಗ ಇತ್ತೀಚೆಗೆ ತನ್ನ ಅಧಿಸೂಚನೆಯಲ್ಲಿ ತಿಳಿಸಿತ್ತು. ಆದರೆ ಇದೀಗ ಕಾರಣಾಂತರಗಳಿಂದ ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಿರುವುದಾಗಿ ಶುಕ್ರವಾರ ಆದೇಶ ಹೊರಡಿಸಲಾಗಿದೆ.
ಶೀಘ್ರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಚ್ ಸೈಟ್ನಲ್ಲಿ ಹೊಸ ದಿನಾಂಕವನ್ನು ಪ್ರಕಟಿಸುವುದಾಗಿ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.