ಸ್ಟಾರ್​ಗಳ ಸ್ಮಾರಕಗಳಿಗೆ ಕರ್ನಾಟಕದ ಸಾರ್ವಜನಿಕರ ಜಾಗ, ಹಣವನ್ನು ಬಳಸಬಾರದು: ನಟ ಚೇತನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸ್ಯಾಂಡಲ್ ವೂಡ್ ಮೇರು ನಟ ವಿಷ್ಣುವರ್ಧನ್​ ಅವರ ಸ್ಮಾರಕ (Vishnuvardhan Memorial) ಮೈಸೂರಿನಲ್ಲಿನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದ್ದಾರೆ.

ಇದರ ಬೆನ್ನಲ್ಲೇ ಆ ದಿನಗಳು ಚೇತನ್​ (Chetan Ahimsa) ಅವರು ಹೊಸ ವಾದ ಮುಂದಿಟ್ಟಿದ್ದಾರೆ. ಚಲನಚಿತ್ರ ಸ್ಟಾರ್​ಗಳ ಸ್ಮಾರಕಗಳಿಗೆ ಕರ್ನಾಟಕದ ಸಾರ್ವಜನಿಕರ ಜಾಗ, ಹಣ ಮತ್ತು ಸಂಪನ್ಮೂಲಗಳನ್ನು ಬಳಸಬಾರದು ಎಂದು ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಹಲವಾರು ಕನ್ನಡಿಗರಂತೆ ಕೆಲಸ ಮಾಡಿ ಸಂಪಾದಿಸುವ ಚಲನಚಿತ್ರ ಸ್ಟಾರ್​ಗಳು ನಮ್ಮ ಸಮಾಜದಲ್ಲಿ ಅನಗತ್ಯ ಪ್ರಚಾರ ಮತ್ತು ತಮ್ಮ ಚಲನಚಿತ್ರಗಳ ಯಶಸ್ಸಿಗೆ ಅನಗತ್ಯವಾಗಿ ಗಮನ ಪಡೆಯುತ್ತಾರೆ. ಕರ್ನಾಟಕದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವ ವಸ್ತು ಸಂಗ್ರಹಾಲಯಗಳಿಗೆ ಸ್ಮಾರಕ ಭೂಮಿಗಳು ಒಳ್ಳೆಯ ಉಪಯೋಗಕ್ಕೆ ಬರುತ್ತವೆ’ ಎಂದು ಚೇತನ್ ಪೋಸ್ಟ್​ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!